Sat. Mar 15th, 2025
ಚಿನ್ನದ ಬೆಲೆ ಇಂದು ಭಾರೀ ಏರಿಕೆ..!*2025

ಚಿನ್ನದ ಬೆಲೆ ಇಂದು ಭಾರೀ ಏರಿಕೆ..!*

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇಂದು ಗುರುವಾರವೂ ಏರಿಕೆ ಆಗಿದೆ.

ಚಿನ್ನದ ಬೆಲೆ ಗ್ರಾಮ್​ಗೆ 50 ರೂನಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆಯಲ್ಲಿ 10 ಪೈಸೆಯಷ್ಟು ಸಣ್ಣ ಪ್ರಮಾಣದಲ್ಲಿ ಏರಿಕೆ ಆಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 7,400 ರೂ ಸಮೀಪಕ್ಕೆ ಹೋಗಿದೆ.

ಅಪರಂಜಿ ಚಿನ್ನದ ಬೆಲೆ 8,062 ರೂಗೆ ಏರಿದೆ. ವಿದೇಶಗಳ ಮಾರುಕಟ್ಟೆಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ಹೆಚ್ಚಳವಾಗಿದೆ. ಇದೇ ವೇಳೆ, ಬೆಳ್ಳಿ ಬೆಲೆಯಲ್ಲಿ ಅಲ್ಪ ಏರಿಕೆ ಆಗಿದೆ.

ನಿನ್ನೆ ಗ್ರಾಮ್​ಗೆ ಒಂದು ರೂನಷ್ಟು ಏರಿದ್ದ ಬೆಳ್ಳಿ ಬೆಲೆ ಇಂದು 10 ಪೈಸೆ ಮಾತ್ರವೇ ಹೆಚ್ಚಳ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 73,900 ರುಪಾಯಿ ಇದೆ.. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 80,620 ರುಪಾಯಿ ಆಗಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

22 ಕ್ಯಾರಟ್​ ನ 10 ಗ್ರಾಂ ಚಿನ್ನದ ಬೆಲೆ: 73,900 ರೂ
24 ಕ್ಯಾರಟ್​ ನ 10 ಗ್ರಾಂ ಚಿನ್ನದ ಬೆಲೆ: 80,620 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 935 ರೂ.

Leave a Reply

Your email address will not be published. Required fields are marked *