Sat. Mar 15th, 2025
ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾವು

ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾವು
ವಿಜಯಪುರ: ಕೃಷಿ ನೀರಿನ ಹೊಂಡದಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ಸೇರಿದಂತೆ ಮೂವರು ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಹರನಾಳ ಗ್ರಾಮದಲ್ಲಿ ಬುಧವಾರ ಸಂಜೆ ನಡೆದಿದೆ. ಗೀತಾ ಶ್ರೀಶೈಲ ಬಡಗಿ (28) ಮತ್ತು ಮಕ್ಕಳಾದ ಶರಣ್ (6), ಶ್ರವಣ್ (4) ಮೃತರೆಂದು ಗುರುತಿಸಲಾಗಿದೆ.

ಗೀತಾ ಅವರನ್ನು ಯಾಳವಾರ ಗ್ರಾಮಕ್ಕೆ ಮದುವೆ ಮಾಡಿಕೊಡಲಾಗಿತ್ತು. ಇತ್ತೀಚೆಗೆ ತವರೂರಿಗೆ ಮಕ್ಕಳ ಸಮೇತವಾಗಿ ಬಂದಿದ್ದರು. ಬುಧವಾರ ತಂದೆಯ ಹೊಲದಲ್ಲಿರುವ ಕೃಷಿ ಹೊಂಡಕ್ಕೆ ತಾಯಿ ಮತ್ತು ಮಕ್ಕಳು ತೆರಳಿದ್ದರು. ಆಗ ಕಾಲು ಜಾರಿ ಹೊಂಡದಲ್ಲಿ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಹೊಂಡದಿಂದ ಮೃತದೇಹಗಳನ್ನು ಸ್ಥಳೀಯರು ಹೊರತೆಗೆದಿದ್ದಾರೆ. ವಿಷಯ ತಿಳಿದ ಪೊಲೀಸರು ಕೂಡಲೇ ಘಟನಾ ಸ್ಥಳಕ್ಕೆ ಭೇಟಿ ನೀಡಿದರು. ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬಸ್ಥರಿಗೆ ಮೃತದೇಹಗಳನ್ನು ಹಸ್ತಾಂತರಿಸಲಾಗಿದೆ. ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲಿಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *