
ಮೂರು ತಿಂಗಳ ‘ಗೃಹಲಕ್ಷ್ಮಿ’ ಹಣ ಯಾವಾಗ ಜಮಾ?: ಇಲ್ಲಿದೆ ಮಾಹಿತಿ
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳ ಪೈಕಿ ಮಹಿಳಾ ಸಬಲೀಕರಣದ ಉದ್ದೇಶದಿಂದ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆ ರಾಜ್ಯ ಮಹಿಳೆಯವರಿಗೆ ಸಾಕಷ್ಟು ಉಪಯೋಗವಾಗಿದೆ.
ಆರಂಭದಿಂದ ಇಲ್ಲಿಯವರೆಗೂ ಹಲವು ಸಮಸ್ಯೆಗಳ ನಡುವೆ ಗೃಹ ಲಕ್ಷ್ಮಿ ಯೋಜನೆಯ ಹಣ ಮಹಿಳೆಯರ ಖಾತೆಗೆ ಜಮಾ ಆಗಿದೆ. ಆದರೆ, ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮೀ ಫಲಾನುಭವಿಗಳ ಖಾತೆ ಹಣ ಜಮಾ ಆಗದ ಹಿನ್ನೆಲೆ ಮಹಿಳೆಯರು ಆತಂಕಕ್ಕೆ ಒಳಗಾಗಿದ್ದಾರೆ.
ಪೆಂಡಿಂಗ್ ಇರುವ ಮೂರು ತಿಂಗಳ ಹಣ ಯಾವಾಗ ಮಹಿಳೆಯರ ಖಾತೆ ಹಣ ಜಮಾ ಆಗಲಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ.
15ನೇ ತಿಂಗಳಿನ ಹಣ ಇನ್ನೂ ಕೆಲ ಜಿಲ್ಲೆಗಳಲ್ಲಿ ಬಂದಿಲ್ಲ. ಹಾಗೂ 16 ಹಾಗೂ 17 ನೇ ಕಂತಿನ ಹಣ ಯಾವಾಗ ಬಿಡುಗಡೆಯಾಗಲಿದೆ ಎಂದು ಮಹಿಳೆಯರು ಕಾದುಕುಳಿತಿದೆ. ಗೃಹ ಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರದ ಕಡೆಯಿಂದ ಹಣ ಮಂಜೂರಾಗಿದ್ದು, ಹಂತ ಹಂತವಾಗಿ ಎಲ್ಲಾ ಮಹಿಳೆಯರಿಗೆ ಪೆಂಡಿಂಗ್ ಹಣ ಜಮೆ ಆಗುತ್ತದೆ ಎಂದು ತಿಳಿದು ಬಂದಿದೆ. ಈ ತಿಂಗಳ ಕೊನೆಯಲ್ಲಿ ಗೃಹ ಲಕ್ಷ್ಮಿ ಯೋಜನೆಯ 15 ಹಾಗೂ 16 ನೇ ಕಂತಿನ ಹಣ ಜಮಾ ಆಗಲಿದೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ 15 ಕಂತಿನ ಹಣ ಜಮಾ ಆಗಿದೆ. ಕೆಲ ಜಿಲ್ಲೆಗಳಲ್ಲಿ ಮಾತ್ರ 15 ಕಂತಿನ ಹಣ ಬಿಡುಗಡೆಯಾಗಿಲ್ಲ. ಇತ್ತ ಲಕ್ಷ್ಮಿ ಯೋಜನೆಯ ಹಣ ಪಾವತಿ ವಿಧಾನದಲ್ಲಿ ಬದಲಾವಣೆ ಮಾಡಲು ಸರ್ಕಾರ ತಯಾರಿ ನಡೆಸುತ್ತಿದೆ. ಫಲಾನುಭವಿಗಳಿಗೆ ನೇರವಾಗಿ ಹಣ ವರ್ಗಾವಣೆಯಾಗುವ ಬದಲು, ತಾಲೂಕು ಪಂಚಾಯತ್ ಮೂಲಕ ಹಣ ವಿತರಿಸುವ ಸಾಧ್ಯತೆ ಇದೆ. ಇನ್ನೂ ಈ ಬದಲಾವಣೆಯಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿನ ಹೊರೆ ಕಡಿಮೆಯಾಗಲಿದೆ.
ಈಗಾಗಲೇ ಮೂರು ತಿಂಗಳಿನಿಂದ ಹಣ ಲಭ್ಯವಾಗದ ಕಾರಣ, ಮಹಿಳೆಯರು ಸರ್ಕಾರದ ಈ ಹೊಸ ನಿರ್ಧಾರದ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಈ ಯೋಜನೆಯ ಹಣವನ್ನು ರಾಜ್ಯ ಕಾರ್ಯದರ್ಶಿಯ ಮೂಲಕ ಸ್ಥಳೀಯ ತಾಲ್ಲೂಕು ಪಂಚಾಯಿತಿಗಳಿಗೆ ವರ್ಗಾವಣೆ ಮಾಡಲಾಗುತ್ತದೆ. ತಾಲ್ಲೂಕು ಪಂಚಾಯಿತಿಯಿಂದ ನೇರವಾಗಿ ಮಹಿಳೆಯರ ಖಾತೆಗೆ ಹಣ ಜಮೆಯಾಗಲಿದೆ.
ಈಗಾಗಲೇ ರಾಜ್ಯ ಸರ್ಕಾರ ಮೂರು ತಿಂಗಳಿನಿಂದ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಪಾವತಿ ಮಾಡಿಲ್ಲ. ಈಗ ಹಣ ಪಾವತಿಯ ಕಾರ್ಯವಿಧಾನದಲ್ಲೇ ಬದಲಾವಣೆ ಮಾಡಲು ಮುಂದಾಗಿದೆ. ಈ ವಿಚಾರದ ಬಗ್ಗೆ ಈಗ ಇಲಾಖೆ ಹಂತದಲ್ಲಿ ಚರ್ಚೆ ನಡೆಯುತ್ತಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆರೋಗ್ಯ ಸ್ಥಿತಿ ಸುಧಾರಣೆಯಾದ ಬಳಿಕ ಅಧಿಕೃತ ಆದೇಶ ಪ್ರಕಟವಾಗುವ ಸಾಧ್ಯತೆಯಿದೆ.
ತಾಲೂಕು ಪಂಚಾಯಿತಿಯಿಂದ ಹಣ ಬಿಡುಗಡೆಯಾದರೆ ಇದು ಅಕ್ರಮಕ್ಕೆ ಕಾರಣವಾಗಬಹುದು ಎಂಬ ಮಾತುಗಳು ಕೇಳಿ ಬಂದಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಹಣ ಪ್ರತಿ ತಿಂಗಳು ರೈತರ ಖಾತೆಗೆ ಜಮೆ ಆಗುತ್ತಿದೆ. ಇದು ದೇಶವ್ಯಾಪಿ ನಡೆಯುತ್ತಿರುವಾಗ ಗೃಹಲಕ್ಷ್ಮಿ ಹಣ ಪಾವತಿಗೆ ಕಷ್ಟ ಯಾಕೆ ಎಂಬ ಪ್ರಶ್ನೆಗಳು ಕೂಡ ಎದ್ದಿವೆ.