Wed. Jul 30th, 2025
ನೋಟಿಸ್‌ ಬಂದಿಲ್ಲ, ಇವಕ್ಕೆಲ್ಲ ಹೆದರುವ ಮಗ ನಾನಲ್ಲ: ಯತ್ನಾಳ್ನೋಟಿಸ್‌ ಬಂದಿಲ್ಲ, ಇವಕ್ಕೆಲ್ಲ ಹೆದರುವ ಮಗ ನಾನಲ್ಲ: ಯತ್ನಾಳ್

ನೋಟಿಸ್‌ ಬಂದಿಲ್ಲ, ಇವಕ್ಕೆಲ್ಲ ಹೆದರುವ ಮಗ ನಾನಲ್ಲ: ಯತ್ನಾಳ್
ವಿಜಯಪುರ: ‘ಬಿಜೆಪಿ ವರಿಷ್ಠರು ನನಗೆ ಯಾವುದೇ ನೋಟಿಸ್ ನೀಡಿಲ್ಲ. ಒಂದು ವೇಳೆ ನೋಟಿಸ್ ಬಂದರೂ ನಾನು ಅದಕ್ಕೆ ಉತ್ತರ ನೀಡುವುದಿಲ್ಲ’ ಎಂದು ನಗರ ಬಿಜೆಪಿ ಶಾಸಕ ಹಾಗೂ ರಾಜ್ಯ ಬಿಜೆಪಿ ಭಿನ್ನರ ಪಡೆ ನಾಯಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.

ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಬಿಜೆಪಿಯ ಕೇಂದ್ರ ಶಿಸ್ತು ಸಮಿತಿಯಿಂದ ನೋಟಿಸ್ ಬಂದಿರುವ ಕುರಿತಾಗಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಬಿಜೆಪಿ ವರಿಷ್ಠರು ನನಗೆ ಯಾವುದೇ ನೋಟಿಸ್ ನೀಡಿಲ್ಲ. ಅಷ್ಟಕ್ಕೂ, ಇಂತಹ ನೂರಾರು ನೋಟಿಸ್‌ಗಳು ನನಗೆ ಬರುತ್ತವೆ. ಅವುಗಳಿಗೆಲ್ಲ ಉತ್ತರ ಕೊಡಲು ಆಗುವುದಿಲ್ಲ. ಇದಕ್ಕೆಲ್ಲ ಹೆದರುವ ಮಗ ನಾನಲ್ಲ ಎಂದು ಖಡಕ್ ಆಗಿ ಉತ್ತರಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸುತ್ತಿರುವುದಕ್ಕೆ ಯತ್ನಾಳರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಕಳೆದ ಸೋಮವಾರ ಮತ್ತೆ ನೋಟಿಸ್ ನೀಡಿತ್ತು. ನೋಟಿಸ್‌ಗೆ 72 ಗಂಟೆಗಳಲ್ಲೇ ಉತ್ತರಿಸುವಂತೆ ಸೂಚಿಸಿದ್ದು, ಒಂದು ವೇಳೆ ನಿಗದಿತ ಸಮಯದಲ್ಲಿ ಉತ್ತರ ನೀಡದಿದ್ದರೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಗಿತ್ತು ಎಂದು ವರದಿಯಾಗಿತ್ತು. ಮೂರು ದಿನಗಳ ಗಡುವು ಗುರುವಾರ ಮುಗಿಯಲಿದೆ. ಹೀಗಾಗಿ ಮುಂದಿನ ನಡೆ ಕುತೂಹಲಕ್ಕೆ ಕಾರಣವಾಗಿದೆ.

Leave a Reply

Your email address will not be published. Required fields are marked *