Fri. Mar 14th, 2025
ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ 8 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ: ಸಚಿವ ಝಮೀರ್ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ 8 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ: ಸಚಿವ ಝಮೀರ್

ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ 8 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ: ಸಚಿವ ಝಮೀರ್
ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣದವರೆಗೆ 7.85 ಲಕ್ಷ ವಿದ್ಯಾರ್ಥಿಗಳಿಗೆ 290 ಕೋಟಿ ರೂ. ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಎಂದು ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದರು.

ಈಗಾಗಲೇ 6.25 ಲಕ್ಷ ವಿದ್ಯಾರ್ಥಿಗಳಿಗೆ ಡಿಬಿಟಿ ಮೂಲಕ 180 ಕೋಟಿ ರೂ. ವರ್ಗಾವಣೆ ಮಾಡಲಾಗಿದ್ದು, 1.60 ಲಕ್ಷ ವಿದ್ಯಾರ್ಥಿಗಳಿಗೆ 100 ಕೋಟಿ ರೂ. ಅನುದಾನ ಅಗತ್ಯವಿರುವ ಬಗ್ಗೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ವಿದ್ಯಾಸಿರಿ ಯೋಜನೆಯಡಿಯಲ್ಲಿ ಜನವರಿ ಅಂತ್ಯದವರೆಗೆ ಹಾಸ್ಟೆಲ್‌ಗಳಲ್ಲಿ 23 ಸಾವಿರ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗಿದ್ದು, ಹಾಸ್ಟೆಲ್‌ನಲ್ಲಿ ಪ್ರವೇಶ ಸಿಗದ 5,753 ವಿದ್ಯಾರ್ಥಿಗಳಿಗೆ ಮಾಸಿಕ 1,500 ರೂ.ನಂತೆ ಹತ್ತು ತಿಂಗಳ ಮೊತ್ತ 15 ಸಾವಿರ ರೂ. ವರ್ಗಾವಣೆ ಮಾಡಲಾಗಿದೆ. ಅದಕ್ಕಾಗಿ 8.63 ಕೋಟಿ ರೂ. ವೆಚ್ಚ ಮಾಡಲಾಗಿದೆ. ಇನ್ನೂ 200 ವಿದ್ಯಾರ್ಥಿಗಳ ಆಧಾರ್ ಲಿಂಕ್ ಸಮಸ್ಯೆ ಇದ್ದು, ಅದು ಸರಿಹೋದ ನಂತರ ಅವರಿಗೂ ಹಣ ವರ್ಗಾವಣೆ ಆಗಲಿದ್ದು, ಶೇ.100 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಿದಂತಾಗಲಿದೆ ಎಂದು ವಿವರಿಸಿದರು.

Leave a Reply

Your email address will not be published. Required fields are marked *